ಇಂದು ರಾಜಧಾನಿಯಲ್ಲಿ ನಾಮ ಪತ್ರ ಸಲ್ಲಿಕೆಯ ಜಾತ್ರೆ : ಯಾರೆಲ್ಲಾ ನಾಮಪತ್ರ ಸಲ್ಲಿಸಲಿದ್ದಾರೆ..?

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ, ನಾಮಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಉಳಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರಲ್ಲೂ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಗಳ ಜಾತ್ರೆಯೇ ನೆರೆಯಲಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕೈ ಅಭ್ಯರ್ಥಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಸಂಪಂಗಿರಾಮನಗರದ ಪ್ರಸನ್ನ ಗಣಪತಿ ದೇವಸ್ಥಾನದಿಂದ ಮೆರವಣಿಗೆ ಹೊರಟು, ಆ ಮೂಲಕ ತೆರಳಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ನಾಮ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.

ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಕೈ ಅಭ್ಯರ್ಥಿ ರಾಜೀವಗೌಡ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿರುವ ಕಾಂಗ್ರೆಸ್ ಪಡೆ, ಸಮಾವೇಶದ ಬಳಿಕ ಮೆರವಣಿಗೆ ಮೂಲಕ ತೆರಳಿ ಉಮೇದುವಾರಿಕೆ ಸಲ್ಲಿಕೆ ಮಾಡುವ ಯೋಜನೆ ಹೊಂದಿದೆ. ಕೆಜಿ ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ 2:10 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

More articles

Latest article

Most read