ಬೆಂಗಳೂರು: ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳ ಸಂಬಂಧ ಇಂದು ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕುಮಾರಸ್ವಾಮಿಯವರೇ ಉಪ್ಪು ತಿಂದವನು ನೀರು ಕುಡಿಯುತ್ತಾನೆ ಎಂದಿದ್ದಾರೆ. ನಮ್ಮ ಕುಟುಂಬ ಬೇರೆ ರೇವಣ್ಣ ಕುಟುಂಬ ಬೇರೆ ಎಂದಿದ್ದಾರೆ. ಸ್ವತಃ ರೇವಣ್ಣ ಅವರೇ ಇದು ನಾಲ್ಕೈದು ವರ್ಷ ಹಳೆಯ ವಿಷಯ ಎಂದು ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದರು.
ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ ಎಂದು ಅವರು ಲೇವಡಿ ಮಾಡಿದರು.
ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ, ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಅವರ ಜತೆಗೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಅನ್ನೋದನ್ನ ಅವರನ್ನೇ ಕೇಳಬೇಕು. ಇದು ಹಳೇ ವಿಡಿಯೋ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ಅಂದರೆ ಪ್ರಜ್ವಲ್ ವಿಡಿಯೋ ಬಗ್ಗೆ ರೇವಣ್ಣ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಗುಸುಗುಸು ಚರ್ಚೆಯಾಗಿದ್ದು, ಈಗ ಬಹಿರಂಗವಾಗಿದೆ. ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.