ಚುನಾವಣೆ ವೇಳೆಯಲ್ಲೇ ಬಾಂಬ್ ಸ್ಫೋಟ : ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ

Most read

ಮೈಸೂರು:  ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ ಮಾತನಾಡಿದರು.

ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ. ಭಾರತವನ್ನು ಒಂದು ಧರ್ಮದ ದೇಶ ಎನ್ನುವ ಪತ್ರಕರ್ತರ ಪ್ರಶ್ನೆಗೆ ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದರು.

ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅಂದೇ ಬೆಂಗಳೂರಿಗೆ ಮರಳಲಿದ್ದೇನೆ.  ಹೈ ಕಮಾಂಡ್ ಸಯ ಕೊಟ್ಟರೆ ಭೇಟಿ ಆಗುತ್ತೇನೆ. ಇನ್ನೂ ಹೈ‌ಕಮಾಂಡ್ ಸಮಯ ಕೇಳಿಲ್ಲ ಎಂದು ಹೇಳಿದರು.

ಸೋಮವಾರ ನಡೆದ ಕೆಡಿಪಿ ಸಭೆ ಕುರಿತು ಮಾತನಾಡಿದ ಅವರು ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ  7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

More articles

Latest article