ಆಪರೇಷನ್ ಸಿಂಧೂರ ಬೆನ್ನಲ್ಲೇ ಜಾತಿ ಗಣತಿ ಘೋಷಿಸಿದ್ದು ಏಕೆ?; ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

Most read

ನವದೆಹಲಿ: ಕಾಶ್ಮೀರದದ ಪಹಲ್ಗಾಮ್‌ ನಲ್ಲಿ ಏ. 22ರಂದು ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ನಂತರ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ ಏಪ್ರಿಲ್. 30 ರಂದು ಜನಗಣತಿ ಜತೆ ಜಾತಿ ಗಣತಿ ನಡೆಸುವುದಾಗಿ ಘೋಷಿಸಿದ್ದು ಅಚ್ಚರಿಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಎರಡು ಹಳೆಯ ವಿಡಿಯೊಗಳ ಸಹಿತ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮಾಹಿತಿ ಹಂಚಿಕೊಂಡಿದ್ದಾರೆ. ಎನ್‌ಡಿಎ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಜಾತಿ ಗಣತಿ ಘೋಷಣೆಯ ಸಂಪೂರ್ಣ ಶ್ರೇಯಸ್ಸು ತನಗೇ ಸಲ್ಲಬೇಕು ಎಂದು ಮೋದಿ ಹೇಳಿ ಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

2023ರ ಅ. 2ರಂದು ಬಿಹಾರದ ಜಾತಿ ಗಣತಿ ಸಮೀಕ್ಷೆ ಬಿಡುಗಡೆ ಸಂದರ್ಭದ ಮಾತನಾಡಿರುವ ವಿಡಿಯೋ ಮತ್ತು 2024ರ ಏ. 28ರಂದು ಜಾತಿ ಗಣತಿಗೆ ಕಾಂಗ್ರೆಸ್‌ ಇಟ್ಟ ಬೇಡಿಕೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದ ಎರಡು ವಿಡಿಯೋ ತುಣುಕುಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಾತಿ ಗಣತಿ ಎಂಬುದು ಹಿಂದುಳಿದ ಸಮಾಜವನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಪ್ರಮುಖ ಮಾರ್ಗವಾಗಿದೆ. ಜಾತಿ ರಾಜಕಾರಣದಲ್ಲಿ ಸರ್ಕಾರವು ನಂಬಿಕೆ ಇಟ್ಟಿಲ್ಲ. ಆದರೆ ಹಿಂದುಳಿದ ಸಮಾಜಗಳ ಸಬಲೀಕರಣಕ್ಕೆ ಬದ್ಧವಾಗಿದೆ ಎಂದು ಭಾನುವಾರ ನಡೆದ ಸಭೆಯಲ್ಲಿ ಹೇಳಿದ್ದರು.

ಇದಕ್ಕೂ ಮುನ್ನ ವಿರೋಧ ಪಕ್ಷಗಳು ಸಮಾಜವನ್ನು ಜಾತಿ ಆಧಾರದಲ್ಲಿ ವಿಭಜಿಸುವ ಮೂಲಕ ಇಂದಿಗೂ ಪಾಪವನ್ನು ಮುಂದುವರಿಸಿವೆ ಎಂದು ಹೇಳಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಜಾತಿ ಗಣತಿಗೆ ಕಾಂಗ್ರೆಸ್‌ ಒತ್ತಾಯಿಸಿದಾಗ ಪಿಎಂ ಮೋದಿ, ಇದು ನಗರ ನಕ್ಸಲರ ಮನಸ್ಥಿತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದನ್ನೂ ಹಂಚಿಕೊಂಡಿದ್ದಾರೆ.
ಸ್ವಾತಂತ್ರ ಬಂದ ನಂತರ ಇದೇ ಮೊದಲ ಬಾರಿಗೆ ಜನಗಣತಿ ಜತೆಯಲ್ಲಿ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಏ. 30ರಂದು ಪ್ರಧಾನಿ ಮೋದಿ ಘೋಷಿಸಿದ್ದರು. ಇದಕ್ಕೂ ಪೂರ್ವದಲ್ಲಿ ಕಾಂಗ್ರೆಸ್ ಸಹಿತ ಇತರ ವಿರೋಧ ಪಕ್ಷಗಳು ಜಾತಿ ಗಣತಿ ನಡೆಸುವಂತೆ ಪಟ್ಟು ಹಿಡಿದಿದ್ದವು. ಬಿಹಾರ, ತೆಲಂಗಾಣ ಮತ್ತು ಕರ್ನಾಟಕ ಜಾತಿ ಗಣತಿ ನಡೆಸಿದ್ದವು.

More articles

Latest article