ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಹಾಸನ ಕಾಮಕಾಂಡದ ರೂವಾರಿ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷ, ಪ್ರಜ್ವಲ್ ನನ್ನು ಪ್ರಧಾನಿಯವರೇ ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೆ ಎಂದು ಪ್ರಶ್ನಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಜ್ವಲ್ ರೇವಣ್ಣನ ಪಾಸ್ ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದೆ.
ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ ಮೋದಿಯೇ ರಕ್ಷಿಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದಾರೆ.
ಮೋದಿಗೆ ಪ್ರಜ್ವಲ್ ರೇವಣ್ಣ “ಕೋಂಪ್ಲೇನ್ ಬಾಯ್” ಇದ್ದಂತೆ. ಏಕೆಂದರೆ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿದರೆ ಮೋದಿ ಶಕ್ತಿ ಬರುತ್ತದೆಯಂತೆ! ಇಂತಹ ಕೋಂಪ್ಲೇನ್ ಬಾಯ್‌ಗೆ ಮೋದಿ ಕಷ್ಟ ಕೊಡಬಲ್ಲರೆ ಎಂದು ವ್ಯಂಗ್ಯವಾಡಲಾಗಿದೆ.