ಕಲ್ಲಡ್ಕ ಭಟ್ಟರಿಗೆ “ಧರ್ಮಸ್ಥಳ” ಬೇಡವಾಗಿದೆಯೇ?: ಬಿಜೆಪಿ ಉತ್ತರಿಸಬೇಕು; ಪ್ರಿಯಾಂಕ್‌ ಖರ್ಗೆ ಆಗ್ರಹ

ಬೆಂಗಳೂರು:ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ! ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ ಎಂದು ಗ್ರಾಂೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ಎಕ್ಸ್‌ ನಲ್ಲಿ ಅವರು ಬಿಜೆಪಿ ಮುಖಂಡರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ,

– ಗಿರೀಶ್ ಮಟ್ಟಣ್ಣನವರ್: ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವಮೋರ್ಚಾದ ಅಧ್ಯಕ್ಷರಾಗಿದ್ದವರು, 2013ರಲ್ಲಿ ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು.

– ಮಹೇಶ್ ಶೆಟ್ಟಿ ತಿಮರೋಡಿ: ಬಿಜೆಪಿ ಪಕ್ಷದಲ್ಲೇ ಇದ್ದವರು, ಸಂಘಪರಿವಾರದ ನಾಯಕರು, ಸದಾ ಸಾವರ್ಕರ್, ಗೋಲ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು.

ಸಾವರ್ಕರ್ ಅನುಯಾಯಿಯ ಬಗ್ಗೆಯೇ ಬಿಜೆಪಿಗೆ ಅಸಹನೆ ಹೊಂದಿರುವುದು ಪರಮಾಶ್ಚರ್ಯ. ಇವರೆಲ್ಲಾ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ?

ಬಿಜೆಪಿ ನಾಯಕರು ಉತ್ತರಿಸಬೇಕು.

ಬಿಜೆಪಿಯ “ಧರ್ಮಸ್ಥಳ ಚಲೋ” ವೇದಿಕೆಯಲ್ಲಿ ಕರಾವಳಿಯ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ?

ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ?

ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ?

ಕಲ್ಲಡ್ಕ ಭಟ್ಟರಿಗೆ “ಧರ್ಮಸ್ಥಳ” ಬೇಡವಾಗಿದೆಯೇ?

ಧರ್ಮಸ್ಥಳ ಇಂದು ಇಬ್ಬರು ಸಂಘಪರಿವಾರದ ಮುಖಂಡರ ಪ್ರತಿಷ್ಠೆಯ #RSSvsRSS ಕಾಳಗದ ಕಣವಾಗಿದೆ, ಹೀಗಿರುವಾಗ ಬಿಜೆಪಿಯ ಹೋರಾಟ, ಹಾರಾಟ, ಚೀರಾಟ ಯಾರ ವಿರುದ್ಧ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ

More articles

Latest article

Most read