ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ದೇಹವನ್ನು ದಂಡಿಸಿಕೊಂಡಿದ್ದು ಏಕೆ?

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಚಾಟಿಯಿಂದ ತಮ್ಮ ಮೈಮೇಲೆ ತಾವೇ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಕಡೆ ಅವರು ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ಗಮನ ಸೆಳೆದಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದ್ದು ತನಿಖೆ ನಡೆಯುತ್ತಿದೆ. ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ಈತನ ವಿರುದ್ದ ಸುಮಾರು 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎನ್ನುವುದು ಅಣ್ಣಾಮಲೈ ಆರೋಪ.

More articles

Latest article

Most read