ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ BSNL ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಕಾಡಾನೆ ಮೃತಪಟ್ಟಿದೆ.
ಆನೆ ಸಾವನ್ನಪ್ಪಿರುವ ಸ್ಥಳದಲ್ಲಿ ವಿದ್ಯುತ್ ತಂತಿ ಹಾದು ಹೋಗಿರುವುದರಿಂದ ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದೆ. ಆನೆಯ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವಲಯ ಅರಣ್ಯ ಅಧಿಕಾರಿ ಹೇಮಂತ್ ತಿಳಿಸಿದ್ದಾರೆ.