ಕುಂಭಮೇಳದಲ್ಲಿರುವ ಕನ್ನಡಿಗರನ್ನು ಕರೆತರಲು ಕ್ರಮ; ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದ್ದು ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಘಟಗೆ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ ಪೋಸ್ಟ್‌ ಹಾಕಿದ್ದು ರಾಜ್ಯದ ಜನರ ರಕ್ಷಣೆಗಾಗಿ ಸಕಲ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಬೇಕು ಎಂದೂ ಸಲಹೆ ನೀಡಿದ್ದಾರೆ.

ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದ್ದು ಅವರನ್ನು ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

More articles

Latest article