Thursday, December 12, 2024

ಯಾವುದೇ ಜವಬ್ಧಾರಿ ಕೊಟ್ಟರೂ ನಿಭಾಯಿಸುವೆ; ಡಾ.ಜಿ.ಪರಮೇಶ್ವರ್

Most read

ಬೆಂಗಳೂರು: ಸಂಪುಟ ಪುನಾರಚನೆ ಮತ್ತು ಖಾತೆ ಬದಲಾವಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆದರೆ ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖಾತೆ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಕೊಟ್ಟ ಜವಾಬ್ದಾರಿಯನ್ನು ಈವರೆಗೆ ನಿಭಾಯಿಸಿಕೊಂಡು ಬಂದಿದ್ದೇನೆ. ಮುಂದೆ ಕೊಡುವ ಸೂಚನೆಯಂತೆ ಕೆಲಸ ಮಾಡಲು ಸಿದ್ದವಾಗಿದ್ದೇನೆ. 1987ರಿಂದಲೂ ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸರ್ಕಾರದಲ್ಲಿ ಕೊಟ್ಟ ಜಾವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎಂದರು.  ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌  ಅವರ ದೆಹಲಿ ಭೇಟಿ ಕುರಿತು ಮಾಹಿತಿ ಇಲ್ಲ. ಇಲಾಖೆ ಅಥವಾ ಪಕ್ಷದ ವಿಚಾರವಾಗಿ ಹೋಗಿರಬಹುದು. ಸಿಎಂ ಸಿದ್ದರಾಮಯ್ಯ ಅವರೂ ಗುರುವಾರ ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿಸಿದರು.

ಶುಕ್ರವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇದೆ. ಈ ಸಭೆಯಲ್ಲಿ ಸಿಎಂ, ಡಿಸಿಎಂ ಭಾಗವಹಿಸಲಿದ್ದಾರೆ. ಈ ಸಭೆಯ ಬಳಿಕ ಹೈಕಮಾಂಡ್ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡಿದರೂ ಮಾಡಬಹುದು. ಆದರೆ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ನೀಡಿರುವ ಬಗ್ಗೆ ವಿವರ ಗೊತ್ತಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಮಾಡುವವರು ಇದನ್ನೆಲ್ಲಾ ಗಮನಿಸುತ್ತಾರೆ ಎಂದು ತಿಳಿಸಿದರು.
 ಕಾಂಗ್ರೆಸ್‌ ನ ಯಾರೊಬ್ಬರೂ ಜೆಡಿಎಸ್ ಶಾಸಕರನ್ನು ಖರೀದಿ ಮಾಡಲು ಹೋಗಿಲ್ಲ. ಹಾಗಾಗಿ ಶಕ್ತಿ ಪ್ರದರ್ಶನದ ಅಗತ್ಯ ಇಲ್ಲ. ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಆಪರೇಷನ್ ಹಸ್ತದ ಕುರಿತಾದ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯ ಇಲ್ಲ ಎಂದರು.

More articles

Latest article