ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ ಹಾಕುತ್ತಿದೆ.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಶಾಸಕರು ಒಟ್ಟುಗೂಡಿ ರಾಜಭವನ ಚಲೋ ಮೂಲಕ ರಾಜ್ಯಪಾಲರ ನಿಚಾಸಕ್ಕೆ ತೆರಳಿ ಸಚಿವ ನಾಗೇಂದ್ರ ಅವರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡಿದೆ.
ಈ ಕುರಿತು ದಾರಿ ವೇಳೆ ಮಾತನಾಡಿದ ಅವರು ಆರ್.ಅಶೋಕ್, ಇದೊಂದು ಕಿವುಡು ಸರ್ಕಾರ, ದಲಿತರ ಹಣ ನುಂಗಿಹಾಕಿದೆ. ಕೂಡಲೇ ನಾಗೇಂದ್ರರನ್ನು ಸಚಿವ ಸ್ಥಾನದಿಂಧ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯಪಾರಿಗೆ ದೂರು ನೀಡಿದ್ದಾರೆ. ರಾಜ್ಯಪಾಲರು, ಸಂವಿಧಾನಾತ್ಮಕ ಅಧಿಕಾರ ಬಳಸಿ ಈ ಸಚಿವರನ್ನು ವಜಾ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದರು.
ಬಹುಕೋಟೆ ಹಗರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರೋದ್ರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ನಾಗೇಂದ್ರಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.