ಇಂದು ನಡೆಯಲಿರುವ MI vs GT ಪಂದ್ಯದಲ್ಲಿ ರೋಹಿತ್ ಶರ್ಮಾ ಆಡಲಿದ್ದಾರೆಯೇ?

ಅಹಮದಬಾದ್‌ (ಗುಜರಾತ್‌) ಏ.20: ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ, ಈಗ ಚೇತರಿಸಿಕೊಂಡಿದ್ದು ಮುಂಬೈ ಇಂಡಿಯನ್ಸ್ ತಂಡದ ಜೊತೆ ತರಬೇತಿ ಆರಂಭಿಸಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಮರಳಿರುವುದು ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಐಪಿಎಲ್ 2026ರ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಗಾಯಗೊಂಡಿದ್ದರು. ಈ ಗಾಯದ ಕಾರಣದಿಂದಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ನಾಯಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಕನಿಷ್ಠ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ತಿಳಿಸಿದ್ದರು. ಆದರೆ ಪಂದ್ಯದ ದಿನ ಅವರು ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿರುವುದು ಶುಭ ಸೂಚನೆಯಾಗಿದೆ.

ರೋಹಿತ್ ಫಿಟ್‌ನೆಸ್ ಬಗ್ಗೆ ಕೋಚ್ ಮಾಹಿತಿ

ಮುಂಬೈ ಇಂಡಿಯನ್ಸ್ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಅವರ ಪ್ರಕಾರ, ರೋಹಿತ್ ಶರ್ಮಾ ಮತ್ತು ಮಿಚೆಲ್ ಸ್ಯಾಂಟ್ನರ್ ಇಬ್ಬರೂ ಗುಜರಾತ್ ವಿರುದ್ಧದ ಪಂದ್ಯಕ್ಕೆ ಲಭ್ಯವಿದ್ದಾರೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಸೋಲಿಸಿದ ನಂತರ ಮುಂಬೈ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಈ ಪಂದ್ಯವು ಮುಂಬೈ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

“ರೋಹಿತ್ ಮತ್ತು ಸ್ಯಾಂಟ್ನರ್ ಇಬ್ಬರೂ ಫಿಟ್ ಆಗಿದ್ದಾರೆ. ನೀವು ನೆಟ್ಸ್ ಬಳಿ ಹೋಗಿ ನೋಡಿದರೆ ರೋಹಿತ್ ಬ್ಯಾಟಿಂಗ್ ಮಾಡುತ್ತಿರುವುದು ಕಾಣಿಸುತ್ತದೆ. ಕಳೆದ ಪಂದ್ಯದಲ್ಲಿ ಸ್ಯಾಂಟ್ನರ್ ಅನಾರೋಗ್ಯದ ಕಾರಣ ಅಲಭ್ಯರಾಗಿದ್ದರು, ಆದರೆ ಈಗ ಅವರಿಬ್ಬರೂ ಆಡಲು ಸಿದ್ಧರಿದ್ದಾರೆ,” ಎಂದು ಪಾರಸ್ ಮಾಂಬ್ರೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಂತಿಮ ನಿರ್ಧಾರ ಯಾರದ್ದು?

ಇಂದಿನ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವ ರೋಹಿತ್, ನೆಟ್ಸ್‌ನಲ್ಲಿ ತಮ್ಮ ವಿಶಿಷ್ಟ ಶೈಲಿಯ ಶಾಟ್‌ಗಳನ್ನು ಬಾರಿಸುತ್ತಾ ಉತ್ತಮ ಲಯದಲ್ಲಿರುವಂತೆ ಕಂಡಿದ್ದಾರೆ. ಆದರೂ, ಅವರ ಆಟದ ಬಗ್ಗೆ ಅಂತಿಮ ನಿರ್ಧಾರವನ್ನು ಅಭ್ಯಾಸದ ಕೊನೆಯ ಹಂತದಲ್ಲಿ ವೈದ್ಯಕೀಯ ತಂಡ ಮತ್ತು ಮುಖ್ಯ ಕೋಚ್ ಮಹೇಲಾ ಜಯವರ್ಧನೆ ತೆಗೆದುಕೊಳ್ಳಲಿದ್ದಾರೆ.

ರೋಹಿತ್ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್ ಮತ್ತು ರಿಯಾನ್ ರಿಕಲ್ಟನ್ ಇನ್ನಿಂಗ್ಸ್ ಆರಂಭಿಸಿದ್ದರು. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡಿ ಕಾಕ್ 112 ರನ್ ಬಾರಿಸಿ ಮಿಂಚಿದ್ದರು. ಒಂದು ವೇಳೆ ರೋಹಿತ್ ತಂಡಕ್ಕೆ ಮರಳಿದರೆ, ಅವರು ಡಿ ಕಾಕ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆಗ ಕಳೆದ ಕೆಲವು ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡುತ್ತಿರುವ ರಿಕಲ್ಟನ್ ತಂಡದಿಂದ ಹೊರಗುಳಿಯಬೇಕಾಗಬಹುದು.

More articles

Latest article

Most read