ಪುಷ್ಪಾ 2 ಚಲನಚಿತ್ರ ಪ್ರದರ್ಶನ, ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ ಬಂಧನ

BREAKING NEWS

ಹೈದರಾಬಾದ್:‌  ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.  ಕೆಲವು ದಿನಗಳ ಹಿಂದೆ ಪುಷ್ಪಾ 2 ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು ಮತ್ತು ಆಕೆಯ ಮಗು ಗಂಭೀರವಾಗಿ ಗಾಯಗೊಂಡಿತ್ತು. ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್‌  25 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದರು.

ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಪೊಲೀಸರು ನೋಟಿಸ್ ನೀಡಿದ್ದರು.  ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ ಎನ್ನಲಾಗಿದೆ.

More articles

Latest article

Most read