ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ : ಮಹಿಳೆ ಸಾವು

ಚಿಕ್ಕಮಗಳೂರು: ಎನ್​ಆರ್​ಪುರ ತಾಲೂಕಿನ ಕಾಂಡ್ಯ ಹೋಬಳಿಯ ಹುಣಸೆಹಳ್ಳಿಯ ಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. 

ಬೋರಮ್ಮ (33) ಮೃತ ಕೂಲಿ ಕಾರ್ಮಿಕ ಮಹಿಳೆ. ಬಳ್ಳಾರಿ ಜಿಲ್ಲೆಯ ಹೆಗಲಗಟ್ಟೆ ಗ್ರಾಮದ ಬೋರಮ್ಮ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ರೈತರು, ಕೂಲಿ ಕಾರ್ಮಿಕರು, ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮೃತದೇಹವನ್ನು ರಸ್ತೆಯಲ್ಲಿಟ್ಟು ಸ್ಥಳೀಯ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಹೆದ್ದಾರಿ ತಡೆದು ಬಾಳೆಹೊನ್ನೂರು ಸಮೀಪದ ಕಡಬಗೆರೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೂಡಲೇ ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಹಾಗೇ ಸ್ಥಳಕ್ಕೆ ಅಡಿಷನಲ್ ಎಸ್ಪಿ ಜಯಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 ಇಬ್ಬರು ಬಲಿ: ಕಳೆದ ಸೋಮವಾರವಷ್ಟೇ ನಾಗೇಶ್ ಗೌಡ ಎಂಬುವರ ತೋಟದಲ್ಲಿ ಕಾಡಾನೆ ತುಳಿದು ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದರು. ಈಗ ಅದೇ ಜಾಗದಲ್ಲಿ ಇಂದು ಕಾಡಾನೆ ಕಾಣಿಸಿಕೊಂಡು ಕೂಲಿ ಕಾರ್ಮಿಕ ಮಹಿಳೆಯನ್ನು ತುಳಿದು ಸಾಯಿಸಿದೆ.

More articles

Latest article

Most read