ದಾವಣಗೆರೆ : ಪತಿ ಜೊತೆ ಜಗಳವಾಡಿ ತವರಿಗೆ ಹೊರಟ್ಟಿದ್ದ ಸಂತ್ರಸ್ತ ಮಹಿಳೆಯನ್ನು ಆತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಜೂನ್ 3 ರಂದು ಹತ್ತು ಜನ ಆರೋಪಿಗಳು 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಈ ಕುರಿತು ಸಂತ್ರಸ್ತ ಮಹಿಳೆಯು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಬೆತ್ತಲೆ ಫೋಟೋ, ವಿಡಿಯೋ ಮಾಡಿ ವಿಕೃತ ಸಂತೋಷ್ ಪಟ್ಟಿದ್ರು. ಫೋಟೋ, ವಿಡಿಯೋ ವೈರಲ್ ಬೆನ್ನಲ್ಲೇ, ಸಿಕ್ಕಿಬಿದ್ದ ಆರೋಪಿಗಳು. ಗ್ರಾಮದ ಹೊರವಲಯದಲ್ಲಿನ ತೋಟದಲ್ಲಿ ಆರೋಪಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಶೇಖರ್ ಹೆಚ್ ಟಿ ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಹಾಜರು.

