ಪಾಕ್‌ ದಾಳಿಗೆ ಓರ್ವ ಮಹಿಳೆ ಸಾವು; ಇಬ್ಬರಿಗೆ ಗಂಭೀರ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಪಾಕಿಸ್ತಾನ ಸೇನಾಪಡೆಗಳು ನಡೆಸಿದ ಶೆಲ್‌ ದಾಳಿಗೆ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಾಕಿಸ್ತಾನ ಪಡೆಗಳ ಆಕ್ರಮಣಕಾರಿ ದಾಳಿಗೆ ಭಾರತೀಯ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ ಎಂದು ಸೇನೆಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಕಾರಿಗೆ ಶೆಲ್ ಅಪ್ಪಳಿಸಿದೆ. ವಾಹನದಲ್ಲಿದ್ದ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ, ನರ್ಗಿಸ್ ಬೇಗಂ ಎಂಬವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ (ಎಲ್‌ಸಿ) ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಪಡೆಗಳು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಗುರುವಾರ ರಾತ್ರಿಯಿಡೀ ಶೆಲ್ ದಾಳಿ ನಡೆಸಿವೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಉರಿ ವಲಯದಲ್ಲಿರುವ ಸಿಲಿಕೋಟ್, ಬೋನಿಯಾರ್, ಕಮಲ್‌ಕೋಟ್, ಮೊಹ್ರಾ ಮತ್ತು ಜಿಂಗಲ್ ಪ್ರದೇಶಗಳ ಮೇಲೆ ದಾಳಿ ನಡೆದಿದೆ. ಕೆಲವು ಕಟ್ಟಡಗಳಿಗೆ ಹಾನಿಯಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಮನೆಗಳನ್ನು ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

More articles

Latest article

Most read