ಮಹಿಳೆಯರನ್ನು ಚುಡಾಯಿಸುತ್ತಿದ್ದ ಆರೋಪಿ ಬಂಧನ

 ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರನ್ನು ಚುಡಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಸ್ಸಾಂನ ಇಸ್ಲಾಂವುದ್ದೀನ್‌ (31) ಬಂಧಿತ ಆರೋಪಿ.ಈತನ ವಿರುದ್ಧ 36 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದರು. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ದೂರುದಾರ ಮಹಿಳೆಯು ಜನವರಿ 23ರಂದು ಬೆಳಿಗ್ಗೆ 8.30ರ ವೇಳೆಗೆ ಬನಶಂಕರಿ ಎರಡನೇ ಹಂತದ ರಸ್ತೆಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಗಮನಿಸಿದ ಆರೋಪಿ, ಮಹಿಳೆಯ ಹಿಂಭಾಗಕ್ಕೆ ಹೊಡೆದು ಪರಾರಿಯಾಗಿದ್ದ. ದೂರುದಾರ ಮಹಿಳೆ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ನೆನಪಿನಲ್ಲಿಟ್ಟುಕೊಂಡಿದ್ದರು. ವಾಹನದ ಸಂಖ್ಯೆಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಇಸ್ಲಾಂವುದ್ದೀನ್‌ ಇದೇ ರೀತಿ ಹಲವು ರಸ್ತೆಗಳಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read