ಅಶ್ಲೀಲ ಪದ ಬಳಕೆ; ಸಿ.ಟಿ ರವಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಮಹಿಳಾ ಆಯೋಗ ಪತ್ರ

Most read

ಬೆಂಗಳೂರು: ವಿಧಾನಪರಿಷತ್‌ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ ತನಿಖೆ  ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಸಭಾಪತಿಗಳಿಗೆ ಪತ್ರ ಬರೆದಿದೆ.

ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಸಚಿವೆಯೊಬ್ಬರನ್ನು ಅತಿ ಕೀಳು ಮಟ್ಟದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿ ನಿಂದಿಸಿದ್ದಾರೆ. ಇದು ನಾಡಿನ ಇಡೀ ಹೆಣ್ಣು ಕುಲಕ್ಕೆ ಹಾಗೂ ಅವರ ಭಾವನೆಗಳಿಗೆ ಮಾಡಿದ ಅಪಮಾನ.ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಯನ್ನು ನಡೆಸಬೇಕು ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಗುರುವಾರ ಸದನದಲ್ಲಿ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಹೇಳನಕಾರಿ ಪದ ಬಳಸಿ ನಿಂದಿಸಿದ್ದರು. ಇದು ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು. ನಂತರ ಸಿ.ಟಿ ರವಿ ವಿರುದ್ಧ ಎಫ್‌ಐ ಆರ್ ದಾಖಲಾದ ಹಿನ್ನೆಲೆಯಲ್ಲಿ ಅವರ ಬಂಧನವೂ ಆಗಿತ್ತು.  ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿ.ಟಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.

More articles

Latest article