ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆ ಸಕ್ರಿಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಮೈಸೂರು: ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಗರದಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ‘ಕೃಷಿಯಲ್ಲಿ ಮಹಿಳೆ: ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ’ ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ನಮ್ಮ ದೇಶದಲ್ಲಿ ಮಹಿಳೆಯರು ಕೃಷಿಯ ಎಲ್ಲಾ ಹಂತಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೇವಲ ಕೃಷಿ ಕ್ಷೇತ್ರ ಅಷ್ಟೇ ಅಲ್ಲ, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಅಕ್ಷರ ದಾಸೋಹ ಹಾಗೂ ಅನ್ನ ದಾಸೋಹದ ಮೂಲಕ ಬಡಜನರಿಗೆ ನೆರವಾಗುತ್ತಿರುವ ಮಠ ಮಾನ್ಯಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ. ಯಾವುದೇ ಸರ್ಕಾರಗಳು ಬಂದರೂ ಮಠಗಳ ಕಾರ್ಯವನ್ನು ಅನುಕರಣೆ ಮಾಡುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅನ್ನ ದಾಸೋಹ ಮತ್ತು ಜ್ಞಾನದಾಸೋಹಗಳನ್ನು ಒಟ್ಟೊಟ್ಟಿಗೆ ನೀಡುವ ಮೂಲಕ ಬಡ ಮಕ್ಕಳಿಗೂ ಕಲಿಯುವ ಅವಕಾಶವನ್ನು ಕಲ್ಪಿಸಿದ್ದು ನಮ್ಮ ಮಠಗಳು. ಸರ್ಕಾರದಿಂದ ಮಾಡಲಾಗದಂತಹ ಮಹತ್ಕಾರ್ಯವನ್ನು ಮಠಗಳು, ಧಾರ್ಮಿಕ ಸಂಸ್ಥೆಗಳು ಮಾಡುತ್ತ ಬಂದಿವೆ. ಮಠ ಮಾನ್ಯಗಳು, ಧಾರ್ಮಿಕ ಸಂಸ್ಥೆಗಳು ಸರಕಾರಕ್ಕೆ ಸಮಾನಾಂತರವಾಗಿ ಶೈಕ್ಷಣಿಕ ಸೇವೆಯನ್ನು ನೀಡುತ್ತ ಬಂದಿವೆ. ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸುವ ಕಾರ್ಯ ಮಠಗಳಿಂದ ಆಗುತ್ತಿದೆ ಎಂದು ಹೇಳಿದರು.

ಸುತ್ತೂರು ಕ್ಷೇತ್ರದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ.‌ಮಹದೇವಪ್ಪ, ಡಾ.ಶರಣ್ ಪ್ರಕಾಶ್ ಪಾಟೀಲ್, ಡಾ.ಎಂಸಿ ಸುಧಾಕರ್, ಶಾಸಕರಾದ ಎ.ಆರ್.ಕೃಷ್ಣ ಮೂರ್ತಿ ಮಂಥರ್ ಗೌಡ, ಡಿ.ರವಿ ಶಂಕರ್, ಗಣೇಶ್ ಪ್ರಸಾದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್, ಮಾಜಿ ಶಾಸಕಿ ಗೀತಾ ಮಹದೇವ ಪ್ರಸಾದ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

More articles

Latest article

Most read