ಎಲ್ಲ ಶಾಲೆಗಳಲ್ಲೂ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ರಚನೆಗೆ ಆದೇಶ:‌ ಡಿಸಿಎಂ ಡಿ.ಕೆ. ಶಿವಕುಮಾರ್

Most read

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡ ಒಂದೊಂದು ಜಾಗೃತಿ ಕ್ಲಬ್ ರಚಿಸಬೇಕು. ಪ್ರಕೃತಿ ಉಳಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿಲಾಗಿದೆ. ಜತೆಗೆ ಪ್ರತಿ ಶಾಲೆಯೂ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದು ಅವರು ಹೇಳಿದರು.

ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ‌ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ ಮತ್ತು ಜವಾಬ್ದಾರಿಯಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ದತ್ತು ಪಡೆದಿದ್ದಾರೆ ಎಂದರು. ಹಸಿರು ಉಳಿಸಿ, ಮರ‌ ಬೆಳೆಸಿ.‌ ಕಸ ತ್ಯಜಿಸಿ ಮರ ಬೆಳೆಸಿ‌” ಎಂದು ವಿದ್ಯಾರ್ಥಿಗಳ ಜತೆ  ಶಿವಕುಮಾರ್ ಅವರೂ ಘೋಷಣೆ ಕೂಗಿದರು.

More articles

Latest article