ಬೆಂಗಳೂರು: ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಮಾನವೀಯ ಮೌಲ್ಯಗಳನ್ನು ಬೆಸೆಯುವ ಕನ್ನಡ ಸಿನಿಮಾಗಳು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದ್ದಾರೆ.

