ಬರೆದಿಟ್ಟುಕೊಳ್ಳಿ, ಮೋದಿ ಮತ್ತೆ ದೇಶದ ಪ್ರಧಾನಿಯಾಗಲ್ಲ: ರಾಹುಲ್‌ ಗಾಂಧಿ

ಕನೌಜ್‌ (ಉತ್ತರಪ್ರದೇಶ): ಉತ್ತರ ಪ್ರದೇಶದಲ್ಲಿ ದೊಡ್ಡ ಬಿರುಗಾಳಿಯೇ ‌INDIA ಮೈತ್ರಿಕೂಟದ ಬಿರುಗಾಳಿಯೇ ಎದ್ದಿದೆ. ಬರೆದಿಟ್ಟುಕೊಳ್ಳಿ, ನರೇಂದ್ರ ಮೋದಿ ಮತ್ತೆ ಈ ದೇಶದ ಪ್ರಧಾನ ಮಂತ್ರಿ ಆಗುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುಡುಗಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಸ್ಪರ್ಧಿಸಿರುವ ಕನೌಜ್‌ ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಬೃಹತ್‌ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ INDIA ಮೈತ್ರಿಕೂಟ 50ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ದೊಡ್ಡಮಟ್ಟದ ಸೋಲನ್ನು ಅನುಭವಿಸಲಿದೆ ಎಂದು ನುಡಿದರು.

ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು INDIA ಮೈತ್ರಿಕೂಟದ ಅಂಗಪಕ್ಷಗಳಾಗಿದ್ದು, ಉತ್ತರಪ್ರದೇಶದಲ್ಲಿ ಸ್ಥಾನಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸುತ್ತಿವೆ.

ಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಎಎಪಿ ಮುಖಂಡ ಸಂಜಯ್‌ ಸಿಂಗ್‌ ಮಾತನಾಡಿದರು. ಕನೌಜ್‌ ನಲ್ಲಿ ಮೇ 13ರಂದು ಚುನಾವಣೆ ನಡೆಯಲಿದೆ.

More articles

Latest article

Most read