ಟೆಸ್ಟ್​​ನಲ್ಲಿ ಹೊಸ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

Most read

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್​ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತದ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದ ಯಶಸ್ವಿ, ಸುನಿಲ್ ಗವಾಸ್ಕರ್ ಅವರ ದಾಖಲೆಯತನ್ನು ಸರಿಗಟ್ಟಿದ್ದಾರೆ.

ಸುನಿಲ್ ಗವಾಸ್ಕರ್ ಮೊದಲ 8 ಟೆಸ್ಟ್ ಪಂದ್ಯಗಳ 16 ಇನಿಂಗ್ಸ್​ಗಳಲ್ಲಿ ಒಟ್ಟು 938 ರನ್ ಕಲೆಹಾಕಿದ್ದರು.  ಇದೀಗ ಮೊದಲ 8 ಟೆಸ್ಟ್​ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಬರೋಬ್ಬರಿ 971 ರನ್ ಕಲೆಹಾಕಿದ್ದಾರೆ. ಈ  ಮೂಲಕ ಸುನಿಲ್ ಗವಾಸ್ಕರ್ ಅವರ ದಾಖಲೆಯತನ್ನು ಸರಿಗಟ್ಟಿದ್ದಾರೆ.

ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ 2 ದ್ವಿಶತಕ, 3 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಡಾನ್ ಬ್ರಾಡ್​ಮ್ಯಾನ್ ಮೊದಲ 8 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 1210 ರನ್​ಗಳು. ಇದುವರೆಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ. ಇದೀಗ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ.

More articles

Latest article