ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.

ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್ ಕೆ. ಎನ್. ಶಿವಕುಮಾರ್ ಈ ಆದೇಶ ಜಾರಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಯತ್ನಾಳ, ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರನ್ನು ಉಲ್ಲೇಖಿಸಿ, ದಿನೇಶ್ ಗುಂಡೂರಾವ್‌ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ಈ ಹೇಳಿಕೆಯ ವಿರುದ್ಧ ಟಬು ರಾವ್ ಅವರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಯತ್ನಾಳ ಅವರು, ಏಪ್ರಿಲ್ 4ರಂದು ಈ ಹೇಳಿಕೆ ನೀಡಿದ್ದರು. ಟಬು ಅವರು ಯತ್ನಾಳ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ನಾನು ಮುಸ್ಲಿಂ ಕುಟುಂಬದಲ್ಲಿ ಹುಟ್ಟಿರಬಹುದು. ಆದರೆ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸಲಾಗದು ಎಂದು ತಿರುಗೇಟು ನೀಡಿದ್ದರು.

More articles

Latest article

Most read