ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್‌

Most read

ಬೆಳಗಾವಿ:  ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ಯಡಿಯೂರಪ್ಪ ಅವರ ವಿರುದ್ಧ ಸಮರ ಸಾರಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ​ಯತ್ನಾಳ್, ಅಧಿವೇಶನ ಆರಂಭವಾಗಿದ್ದರೂ ಮತ್ತೆ  ಅವರ ವಿರುದ್ಧ ಗುಡುಗಿದ್ದಾರೆ.

ಬಿಎಸ್​ ಯಡಿಯೂರಪ್ಪ  ಅವರು ವೀರಶೈವ ಸಮುದಾಯದಲ್ಲಿ ಬೇರೆ ನಾಯಕರನ್ನು ರಾಜಕೀಯವಾಗಿ ಬೆಳೆಯಲು ಬಿಡುವುದಿಲ್ಲ.  ಜಗದೀಶ್ ಶೆಟ್ಟರ್, ಬಿ.ಬಿ.ಶಿವಪ್ಪ ಅವರನ್ನು ಬೆಳೆಯಲು ಬಿಡಲಿಲ್ಲ. ಎಸ್.ಮಲ್ಲಿಕಾರ್ಜುನಯ್ಯ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡಿದರು.  ಬಿ.ಬಿ.ಶಿವಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದರು ಎನ್ನುವುದೆಲ್ಲವೂ ಗೊತ್ತಿದೆ ಎಂದು ಹರಿಹಾಯ್ದಿದ್ದಾರೆ.

ನನ್ನನ್ನೂ ರಾಜಕೀಯವಾಗಿ ಮುಗಿಸಬೇಕು ಎಂದು ಭಾವಿಸಿದ್ದಾರೆ. ನನ್ನ ವಿರುದ್ಧ ವಿಜಯಪುರದಲ್ಲಿ ತಂಡ ಕಟ್ಟುವ ಕೆಲಸ ಆಗುತ್ತಿದೆ.

ಇತ್ತೀಚಿಗೆ ನಡೆದ ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದೆ. ಇದಕ್ಕೆ ತಂದೆ ಮತ್ತು ಮಗ ನೇರ ಕಾರಣ. ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಅವರ ವಿರುದ್ಧ ಹೋರಾಟ ನಿರಂತರವಾಗಿರುತ್ತದೆ ಎಂದು ​ ಯತ್ನಾಳ್ ​​ ಮತ್ತೊಮ್ಮೆ ಗುಡುಗಿದ್ದಾರೆ.

ಬಿಎಸ್​ ಯಡಿಯೂರಪ್ಪ ಬೆದರಿಕೆಯಿಂದ ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗಂಭೀರವಾದ ಪ್ರಕರಣಗಳಿವೆ. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಅವರು ಹೆದರಬೇಕು, ನಾನು ಯಾಕೆ ಹೆದರಬೇಕು? ಎಂದು ಪ್ರಶ್ನಿಸಿದ್ದರು.

More articles

Latest article