ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು, ಅವರ ಹೇಳಿಕೆಯು ಸಮಾಜದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು, ಇಂತಹ ವಿಷಯದಲ್ಲಿ ಜಾಗರೂಕರಾಗಿರಬೇಕು ಎಂದು ಹೇಳಿದರು.
ನೀವು ನಿಮ್ಮ ಹಕ್ಕನ್ನು 19(1)(ಎ), ಆರ್ಟಿಕಲ್ 25 ರ ಅಡಿಯಲ್ಲಿ ನಿಮ್ಮ ಹಕ್ಕನ್ನು ನೀವು ದುರುಪಯೋಗಪಡಿಸಿಕೊಂಡಿದ್ದೀರಿ. ಆದರೀಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಕುರಿತು). ಆದರೆ ನಿಮ್ಮ ಹೇಳಿಕೆಯಿಂದಾಗುವ ದುಷ್ಪರಿಣಾಮ ಬಗ್ಗೆ ನಿಮಗೆ ಗೊತ್ತಿಲ್ಲವೇ? ನೀವು ಸಾಮಾನ್ಯನಲ್ಲ. ಮಂತ್ರಿ ಸ್ಥಾನದಲ್ಲಿದ್ದೀರಿ. ಇದರಿಂದಾಗುವ ಪರಿಣಾಮಗಳನ್ನು ನೀವು ತಿಳಿದುಕೊಳ್ಳಬೇಕು ಎಂದು ಪೀಠವು ಹೇಳಿದೆ.
ಸ್ಟಾಲಿನ್ ಅವರ ಹೇಳಿಕೆಗಳ ಮೇಲೆ ಹಲವಾರು ರಾಜ್ಯಗಳಲ್ಲಿ ದಾಖಲಾದ ಅನೇಕ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಲು ಕೋರಿ ಸುಪ್ರೀಂ ಕೋರ್ಟ್‌ಗೆ ತೆರಳಿದ ಸ್ಟಾಲಿನ್ ಅವರ ವಕೀಲರಿಗೆ, “ನೀವು ಸಾಮಾನ್ಯರಲ್ಲ, ನೀವು ಮಂತ್ರಿ, ನಿಮ್ಮ ಹೇಳಿಕೆಯಿಂದಾಗುವ ಪರಿಣಾಮಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳುವ ಮೂಲಕ ಮಾರ್ಚ್ 15ಕ್ಕೆ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ