Saturday, July 27, 2024

ಆಂಧ್ರ ಸಿಎಂ ಜಗನ್​ ಸಹೋದರಿ ವೈ. ಎಸ್ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ

Most read

ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೈ.ಎಸ್.ಶರ್ಮಿಳಾ ಅವರು ತೆಲಂಗಾಣದಲ್ಲಿ YSR ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗ ಅಧಿಕೃತವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.

ರಾಹುಲ್ ಗಾಂಧಿ ಶರ್ಮಿಳಾ ಅವರನ್ನು ಕಾಂಗ್ರೆಸ್ ಪಕ್ಷದ ಶಾಲನ್ನು ಹೊದಿಸುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡಿದ್ದಾರೆ.

More articles

Latest article