Wednesday, May 22, 2024

YS Sharmila: ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

Most read

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. 

ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್​ ಶರ್ಮಿಳಾ(YS Sharmila) ನೇಮಕಗೊಂಡಿದ್ದಾರೆ.

ವೈಎಸ್‌ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ಅಧಿಕೃತವಾಗಿ ಜನವರಿ ೪ ರಂದು ಕಾಂಗ್ರೆಸ್ ಸೇರ್ಪಡೆಯಾದರು.

ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ನಾಯಕ ವೈಎಸ್ ರಾಜಶೇಖರ ರೆಡ್ಡಿ ಅವರ ಮಗಳು ಹಾಗೂ ಈಗಿನ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ತಂಗಿಯಾಗಿರುವ ಶರ್ಮಿಳಾ, ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

More articles

Latest article