Thursday, July 25, 2024

ಮಾರ್ಚ್‌ 2 ರಂದು ಚಾಮರಾಜನಗರದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “ಯುವ” ಚಿತ್ರದ ಮೊದಲ ಹಾಡು

Most read

“ರಾಜಕುಮಾರ”, “ಕೆ.ಜಿ.ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಸಂಸ್ಥೆ ಮೂಲಕ ನಿರ್ಮಾಣವಾಗಿರುವ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ”. ವಿಜಯ್ ಕಿರಗಂದೂರ್ ಈ ಚಿತ್ರದ ನಿರ್ಮಾಪಕರು.

ಸಂತೋಷ್ ಆನಂದರಾಮ್ ನಿರ್ದೇಶಿಸಿ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “ಯುವ” ಚಿತ್ರದ ಮೊದಲ ಹಾಡು ಮಾರ್ಚ್ 2 ರಂದು ಬಿಡುಗಡೆಯಾಗಲಿದೆ. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ಆಯೋಜಿಸಲಾಗಿರುವ ಅದ್ದೂರಿ‌ ಸಮಾರಂಭದಲ್ಲಿ ಚಿತ್ರದ ಚೊಚ್ಚಲ ಗೀತೆ “ಒಬ್ಬನೇ ಶಿವ ಒಬ್ಬನೇ ಯುವ” ಹಾಡು ಅನಾವರಣವಾಗಲಿದೆ.

ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್ ಮೊದಲ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 29 ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ.

ಯುವ ರಾಜಕುಮಾರ್ ಹಾಗೂ ಸಪ್ತಮಿಗೌಡ ನಾಯಕ – ನಾಯಕಿಯಾಗಿ ನಟಿಸಿರುವ “ಯುವ” ಚಿತ್ರದ ತಾರಾಬಳಗಲ್ಲಿ ಅಚ್ಯುತಕುಮಾರ್, ಸುಧಾರಾಣಿ, ಕಿಶೋರ್ ಮುಂತಾದವರಿದ್ದಾರೆ.

More articles

Latest article