ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ – ಜಮೀರ್ ಅಹಮದ್ ಖಾನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಯವರು ಪಿತೂರಿ ಮಾಡಿ ಸಿದ್ದರಾಮಯ್ಯ ಅವರನ್ನು ಇಳಿಸಲು ಸಂಚು ರೂಪಿಸಿದ್ದಾರೆ. ಉಪ ಚುನಾವಣೆ ಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.

ಬಿಜೆಪಿ ಯವರು ಚುನಾವಣೆ ಇದೆ ಎಂದು ಜನರನ್ನು ದಿಕ್ಕು ತಪ್ಪಿಸಿ ಅನಗತ್ಯ ವಿವಾದ ಸೃಷ್ಠಿ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದು ಅವರಿಗೆ ಸೂಕ್ತ ಪಾಠ ಕಲಿಸಿ ಎಂದು ಹೇಳಿದರು.

ಅಜ್ಜಂ ಪೀರ್ ಖಾದ್ರಿ ಅವರಿಗೆ ಟಿಕೆಟ್ ತಪ್ಪಿರಬಹುದು. ಆದರೆ ದೊಡ್ಡ ಅವಕಾಶ ಅವರಿಗೆ ಸಿಗಲಿದೆ. ಯಾಸೀರ್ ಪಟಾಣ್ ಅವರ ಶಿಷ್ಯ ರಾಗಿದ್ದು ಎಲ್ಲರೂ ಜತೆಗೂಡಿ ಕೆಲಸ ಮಾಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಇಸ್ಮಾಯಿಲ್ ತಮಟ್ ಗಾರ್, ಅಲ್ತಾಫ್ ಕಿತ್ತೂರ್ ಉಪಸ್ಥಿತರಿದ್ದರು.

More articles

Latest article

Most read