ದ್ವಿಚಕ್ರ ವಾಹನದ ಮೇಲೆ ಹರಿದ ಶಾಲಾ ಬಸ್‌ : ಇಬ್ಬರು ಹೆಣ್ಣು ಮಕ್ಕಳ ಸಾವು

ಇಬ್ಬರು ಹೆಣ್ಣು ಮಕ್ಕಳನ್ನು ಬಲಿ ಪಡೆದ ಶಾಲಾ ಬಸ್

0
13

ಬೆಂಗಳೂರು : ನೋಡ ನೋಡುತ್ತಿದ್ದಂತೆ ಶಾಲಾ ಬಸ್ ದ್ವಿಚಕ್ರ ವಾಹನದ ​ ಮೇಲೆ ಹರಿದ ಪರಿಣಾಮ ಇಬ್ಬರು ಹೆಣ್ಣು ಮಕ್ಕಳು ಸ್ಥಳದಲ್ಲೇ  ಉಸಿರು ಚೆಲ್ಲಿದ್ದಾರೆ. ಈ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. 

ವರ್ಷಾ (2) ಹಾಗೂ ಭಾನು(4) ಮೃತ ಮಕ್ಕಳು.  ಯಾದಗಿರಿ ಮೂಲದ ನಾಗನಗೌಡ ಎವರು ಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು.
ಶಾಲಾ ಸಮಯವಾದ್ದರಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಬಸ್‌ ಬರುತ್ತಿತ್ತು. 

ಇದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು. ಆದರೆ ಬಸ್‌ ಚಾಲಕ ಸ್ವಲ್ಪವೂ ನಿಲ್ಲಿಸದೆ ಬೈಕ್‌ ಮೇಲೆಯೇ ಹರಿಸಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದೆ. ಈ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್​ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರ ಆಕ್ರಂದನ : ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ   ಆಕ್ರಂದನ ಮುಗಿಲು ಮುಟ್ಟಿತ್ತು
ಚಾಲಕ ವಶಕ್ಕೆ :  ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here