ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಬಿಕ್ಲು ಶಿವ ಸಾವು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆ ಬಿಜೆಪಿ ಶಾಸಕ ಬೈರತಿ ಬಸವರಾಜ್ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧನ ಭೀತಿಯಿಂದ ಭೈರತಿ ಬಸವರಾಜ್ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಗುರುವಾರ ಸಂಜೆ ಇಂಡಿಗೋ 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಪೊಲೀಸರು ಭೈರತಿ ಬಸವರಾಜ್ನನ್ನ ಏರ್ಪೋರ್ಟ್ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ನಾಳೆ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಸಿಐಡಿ ನ್ಯಾಯಾಧೀಶರ ಎದುರು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲಿದೆ.

